ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ ಇತಿಹಾಸ ಪ್ರಸಿದ್ಧ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಶನಿವಾರ ಅದ್ದೂರಿಯಾಗಿ ನೆರವೇರಿತು.
ರಥಸಪ್ತಮಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ತಾಲೂಕು ಆಡಳಿತದ ವತಿಯಿಂದ ಮತ್ತು ದೇವಾಲಯ ಸಮಿತಿಯ ಸದಸ್ಯರ ಸಹಯೋಗದೊಂದಿಗೆ ರಥೋತ್ಸವ ನಡೆಯಿತು.
ರಥೋತ್ಸವ ಕಾರ್ಯಕ್ರಮದಲ್ಲಿ ಕೊರಟಗೆರೆ ಕ್ಷೇತ್ರದ ಶಾಸಕ ಡಾ ಜಿ ಪರಮೇಶ್ವರ್,ಮಾಜಿ ಶಾಸಕ ಪಿ.ಆರ್ ಸುಧಾಕರ್ ಲಾಲ್ ಮತ್ತು ಬಿಜೆಪಿ ಆಕಾಂಕ್ಷಿತ ಅಭ್ಯರ್ಥಿ ಬಿ ಎಚ್ ಅನಿಲ್ ಕುಮಾರ್ ಸೇರಿದಂತೆ ಹಲವು ಜೆಡಿಎಸ್ ಮತ್ತು ಕಾಂಗ್ರೆಸ್ ಹಾಗೂ ಬಿಜೆಪಿ ಸ್ಥಳೀಯ ಮುಖಂಡರು ಸೇರಿದಂತೆ ಸಾವಿರಾರು ಜನರು ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ರಥೋತ್ಸವಕ್ಕೆ ಬಂದಂತಹ ಸುತ್ತಮುತ್ತಲಿನ ಗ್ರಾಮದ ಜನರಿಗೆ ದೇವಾಲಯ ಸಮಿತಿ ಮತ್ತು ಸೇವಾ ಕರ್ತರ ಸಹಕಾರದೊಂದಿಗೆ ಅನ್ನ ಸಂತರ್ಪಣೆ, ಪಾನಕ, ಹೆಸರು ಬೇಳೆಯನ್ನು ವಿತರಿಸಲಾಯಿತು.
ರಥೋತ್ಸವದ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಹೋಮ ಹವನಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಳೆದ ಎರಡು ವರ್ಷಗಳಿಂದ ಕರೋನಾ ಸಾಂಕ್ರಾಮಿಕ ರೋಗದಿಂದ ಕಳೆಗುಂದಿದ್ದ ರಥೋತ್ಸವ ಈ ಬಾರಿ ಬಹಳ ಅದ್ದೂರಿಯಾಗಿ ನಡೆಯಿತು. ( ಚಿತ್ರ ಇದೇ ಬಳಸಿ )
