ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸೌಲಭ್ಯ ಪಡೆಯುವ ಹಿಂದುಳಿದ ವರ್ಗಗಳ ಪ್ರವರ್ಗ-೧ರ 53(ಚಿ) ಯಿಂದ 53 (ತ)ವರೆಗಿನ ಮತ್ತು ಇದರ ಉಪಜಾತಿಗಳಿಗೆ ಒಳ ಪಡುವ ಫಲಾಪೇಕ್ಷೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಅರ್ಜಿದಾರರು ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು,
-ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರು ಆಗಿರಬೇಕು

ವಾರ್ಷಿಕ ವರಮಾನ ಗ್ರಾಮೀಣರು 98 ಸಾವಿರಗಳು, ಹಾಗೂ ನಗರ ಪ್ರದೇಶದವರೆಗೆ 1,20,000 ಗಳ ಮಿತಿಯಲ್ಲಿರಬೇಕು.

ಆಧಾರ್ ಕಾರ್ಡ್ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು.

ಚಾಲ್ತಿಯಲ್ಲಿರುವ ಆಧಾರ್ ಜೋಡಣೆಯಾದ ರಾಷ್ಟ್ರೀಕೃತ ಬ್ಯಾಂಕಿನ ಪಾಸ್ ಬುಕ್ ಒದಗಿಸಬೇಕು.

ಅರ್ಜಿದಾರರು ತಮ್ಮ ಎರಡು ಭಾವಚಿತ್ರಗಳನ್ನು ಲಗತ್ತಿಸಬೇಕು.

ಒಂದು ಬಾರಿ ನಿಗಮದಿಂದ ಯಾವುದಾದರೂ ಯೋಜನೆಯಲ್ಲಿ ಸೌಲಭ್ಯ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

You May Also Like