ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಕೆಲವು ಅದಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಮುನ್ನೆಚ್ಚರಿಕೆಗಳು
ಕ್ಯಾನ್ಸರ್ ರೋಗಕ್ಕೆ ಕಾರಣಗಳು
1. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ.
2. ಧೂಮಪಾನ ಮತ್ತು ಮಧ್ಯಪಾನ.
3. ಅನುವಂಶಿಯ ಕಾರಣಗಳು.
4. ಆರಾಮದಾಯಕ ಜೀವನ ಶೈಲಿ ಅನಾರೋಗ್ಯ, ಪೂರ್ಣ ಆಹಾರದ ಪದ್ಧತಿ ಮತ್ತು ಒತ್ತಡದ ಜೀವನ ಶೈಲಿ.
5. ವಿಕಿರಣದ ಮುಖಾಂತರ.
6. ಅತಿಯಾದ ಗರ್ಭ ನಿರೋಧಕ ಮಾತ್ರೆಗಳು, ಮತ್ತು ಕೃತಕ ರಸದೂತ ಮಾತ್ರೆಗಳ ಅನಿಯಂತ್ರಿತ ಬಳಕೆ.
7. ವಾತಾವರಣದ ವೈಪರೀತ್ಯ , ವಾಯುಮಾಲಿನ್ಯ ವೃತ್ತಿ ಸಂಬಂಧಿ ಕ್ಯಾನ್ಸರ್ ಕಾರಕ ವಸ್ತುಗಳ ದೇಹಕ್ಕೆ ಸೇರುವುದರಿಂದ
8. ಹೆಪಟೈಟಿಸ್ ಬಿ ಮತ್ತು ಸಿ ವೈರಸ್ ನ ಸೋಂಕು ಹ್ಯೂಮನ್ ಪಾಪಿಲೋಮ ವೈರಸ್ ಇತ್ಯಾದಿ ವೈರಸ್ ಸೋಂಕಿನಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ.
9.ಅನಾರೋಗ್ಯಕರ ಲೈಂಗಿಕ ಜೀವನ ಮತ್ತು ಹತ್ತು ಹಲವಾರು ಲೈಂಗಿಕ ಸಂಬಂಧಗಳು, ಹಲವಾರು ಬಾರಿ ಗರ್ಭ ಧರಿಸುವುದು.
ಕ್ಯಾನ್ಸರ್ ತಡೆಗಟ್ಟುವುದು ಹೇಗೆ?
1. ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ವರ್ಜಿಸಬೇಕು. ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಉಪಯೋಗಿಸಬಾರದು.
2. ಧೂಮಪಾನ ಖಂಡಿತವಾಗಿಯೂ ಕ್ಯಾನ್ಸರ್ ರೋಗಕ್ಕೆ ಪೂರಕ ಧೂಮಪಾನ ಮಾಡುವ 70 ಮಂದಿ ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗುತ್ತಾರೆ ಎನ್ನುವ ವರದಿ ಇದೆ.
3. ಮದ್ಯಪಾನ ಕೂಡ ವರ್ಜಿಸಬೇಕು. ಧೂಮಪಾನ ಮದ್ಯಪಾನ ಮತ್ತು ತಂಬಾಕು ಜಗಿಯುವುದು ಈ ಮೂರು ಕೂಡ ಮನುಷ್ಯ ಕುಲದ ಬಹುದೊಡ್ಡ ವೈರಿ. ಈ ಮೂರು ಚಟಗಳು ಒಟ್ಟು ಸೇರಿ ಕಟ್ಟಿಟ್ಟ ಬುತ್ತಿ.
4. ಕೆಲವೊಂದು ಕ್ಯಾನ್ಸರ್ (ವೃಷಣದ ಕ್ಯಾನ್ಸರ್, ಸ್ತನ ಕ್ಯಾನ್ಸರ್) ಅನುವಂಶಿಯವಾಗಿ ಬರುತ್ತದೆ. ಈ ರೀತಿಯ ಚರಿತ್ರೆಯುಳ್ಳವರು ಕಾಲಕಾಲಕ್ಕೆ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು.
5. ಅತಿಯಾದ ರಸದೂತಗಳ ಬಳಕೆ ಮತ್ತು ಅತಿಯಾದ ಗರ್ಭ ನಿರೋಧಕಗಳ ಬಳಕೆ ಅನಾರೋಗ್ಯಕರ ಲೈಂಗಿಕ ಪ್ರಕ್ರಿಯೆಗಳು ಮತ್ತು ಸಂಬಂಧಗಳಿಗೆ ಕಡಿವಾಣ ಹಾಕಬೇಕು
6. ಸಮತೋಲಿನ ಆಹಾರ ಮತ್ತು ದೈಹಿಕ ವ್ಯಾಯಾಮಗಳಿಂದ ಕೂಡಿದ ಆರೋಗ್ಯಕರವಾದ ಜೀವನ ಕ್ರಮ ಅಳವಡಿಸಿಕೊಳ್ಳಬೇಕು ಕಲುಷಿತ ವಾತಾವರಣ ಕಲುಷಿತ ಆಹಾರ ನೀರು ಇತ್ಯಾದಿಗಳಿಂದಲೂ ಕ್ಯಾನ್ಸರ್ ಬರಬಹುದು ವಿಕಿರಣ ಸೂಸುವ ವಾತಾವರಣ ಮತ್ತು ವೃತ್ತಿ ಸಂಬಂಧಿ ಕ್ಯಾನ್ಸರ್ ಕಾರಕ (ಸೀಸದ ಕಾರ್ಖಾನೆ ಸಿಮೆಂಟ್ ಕಾರ್ಖಾನೆ) ವಾತಾವರಣವಿದ್ದಲ್ಲಿ ಕ್ಯಾನ್ಸರ್ ಬರದಂತೆ ಎಚ್ಚರ ವಹಿಸಬೇಕು.
7. ಕಾಲ ಕಾಲಕ್ಕೆ ವೈದ್ಯರ ಬಳಿ ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಂಡಲ್ಲಿ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್,ಸರ್ವಿಕ್ಸ್ ಕ್ಯಾನ್ಸರ್ ಮತ್ತು ಇನ್ನಾವುದೇ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಬಹುದು.