ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ (ಸ್ನಾತಕೋತ್ತರ ಮತ್ತು ವೃತ್ತಿಪರ ವಿದ್ಯಾರ್ಥಿಗಳಿಗೆ ಮಾತ್ರ) ಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಫೆಬ್ರವರಿ 11ರವರೆಗೆ ವಿಸ್ತರಿಸಲಾಗಿದೆ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವವರು ಇಲಾಖಾ ವೆಬ್ಸೈಟ್ www bcwd.karnataka.gov.in ಅನ್ನು ವೀಕ್ಷಿಸಬಹುದು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-8050 370006ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
You May Also Like
ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ನಾರಾಯಣಸ್ವಾಮಿ. ಎನ್
Comments Off on ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್