ಮರುಬಳಕೆ ಮಾಡಬಹುದಾದ ಉಡಾವಣಾ ವಾಹಕವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿಸುವ ಪ್ರಾತ್ಯಕ್ಷಿಕೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿರುವ ಮರುಬಳಕೆ ರಾಕೆಟ್ಗಳ ಇಳಿದಾಣದಲ್ಲಿ ಯೋಜನೆ ಸಂಬಂಧಿತ ಕೆಲಸ ಆರಂಭವಾಗಿದೆ ಎಂದು ಇಸ್ರೋ ಅಧ್ಯಕ್ಷರು ಆರಂಭಿಕ ಸಿದ್ಧತೆಗಳು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ನಂತರ ಲ್ಯಾಂಡಿಂಗ್ ಪ್ರಾತ್ಯಕ್ಷಿಕೆ ನಡೆಸಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು ಎಸ್ ಎಸ್ ಎಲ್ ವಿ ಡಿ2 ಯಶಸ್ವಿ ಉಡಾವಣೆಯ ನಂತರ ವರದಿಗಾರರೊಂದಿಗೆ ಮಾತನಾಡಿ ಸದ್ಯ ನಾವು ಮುಂದಿನ ಉಡಾವಣೆಗಾಗಿ ಜಿ ಎಸ್ ಎಲ್ ವಿ ಎಂ ಕೆ 3 ಉಡಾವಣಾ ವಾಹಕ ಸಜ್ಜುಗೊಳಿಸುತ್ತಿದ್ದೇವೆ. ಇದು ಒನ್ ವೆಬ್ ಇಂಡಿಯಾ-2 ಜೊತೆಗೆ 36 ಉಪಗ್ರಹಗಳನ್ನು ಒಟ್ಟಿಗೆ ಉಡಾವಣೆ ಮಾಡುವ ಎಲ್ ವಿ ಎಂ 3ಎಂ3 ಕಾರ್ಯಕ್ರಮದ ಭಾಗವಾಗಿದೆ. ಈ ಉಡಾವಣೆ ಮಾರ್ಚ್ ಮಧ್ಯೆ ನಡೆಯಲಿದೆ ಎಂದು ತಿಳಿಸಿದರು.
ಪಿ ಎಸ್ ಎಲ್ ವಿ ಸಿ 55 ಮಿಷನ್ ಉಡಾವಣೆ ಕಾರ್ಯಕ್ರಮವನ್ನು ಇಸ್ರೋ ಆರಂಭಿಸಿದೆ ವಾಣಿಜ್ಯ ಉದ್ದೇಶದ ಈ ಉಡಾವಣೆಯನ್ನು ನ್ಯೂ ಸ್ಪೇಸ್ ಇಂಡಿಯಾ ಲಿಮ್ಡ್ ಗಾಗಿ (ಎನ್ ಎಸ್ ಐ ಎಲ್) ನಡೆಸಲಾಗುತ್ತಿದೆ ಇದು ಬಹುಶಃ ಮಾರ್ಚ್ ಅಂತ್ಯದ ವೇಳೆಗೆ ನೆರವೇರಲಿದೆ ಉಡಾವಣೆ ಕೇಂದ್ರದ ಹೊಸ ಸೌಲಭ್ಯದ ನೆಲೆಯಲ್ಲಿ ರಾಕೆಟ್ ಇರಿಸುವ ಮೂಲಕ ಉಡಾವಣೆ ಕಾರ್ಯಕ್ರಮ ಶುಕ್ರವಾರವೇ ಪ್ರಾರಂಭಿಸಲಾಗಿದೆ ಎಂದರು ನಿಸಾರ್ ನಾಸಾ ಇಸ್ರೋ (ಎಸ್ ಎ ಆರ್ ಮಿಷನ್) ಉಡಾವಣೆ ವರ್ಷದ ಅಂತ್ಯದ ವೇಳೆಗೆ ನಿಗದಿಪಡಿಸಲಾಗಿದೆ ಇಸ್ರೋ ಈ ವರ್ಷದಲ್ಲಿ ಹಲವು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಕೈಗೊಳ್ಳಲಿದೆ ಜೊತೆಗೆ ಮಾನವ ಸಹಿತ ಗಗನಯಾನ ಕಾರ್ಯಕ್ರಮಕ್ಕೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.