ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 2023 ಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಯವರು ಚಾಲನೆ ನೀಡಲಿದ್ದು ಫೆಬ್ರವರಿ 13 ರಿಂದ 17ರವರೆಗೆ ನಡೆಯಲಿರುವ ಐದು ದಿನಗಳ ಈ ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ದೇಶದ ಏರೋ ಸ್ಪೇಸ್ ಮತ್ತು ರಕ್ಷಣಾ ಸಾಮರ್ಥ್ಯದ ಪ್ರದರ್ಶನವಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
ಭಾನುವಾರ ಬೆಂಗಳೂರು ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಮೇಕ್ ಇನ್ ಇಂಡಿಯಾ ಮೇಕ್ ಫಾರ್ ದಿ ವರ್ಲ್ಡ್ ದೃಷ್ಟಿಗೆ ಅನುಗುಣವಾಗಿ ಸ್ವದೇಶಿ ಉಪಕರಣಗಳು ತಂತ್ರಜ್ಞಾನಗಳನ್ನು ಪ್ರದರ್ಶಿಸುವುದು ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸುವುದರ ಮೇಲೆ ಕೇಂದ್ರೀಕರಿಸಲಾಗುತ್ತದೆ ಎಂದರು.
ಏರೋ ಇಂಡಿಯಾ 2023 ದೇಶದ ಉತ್ಪಾದನಾ ಸಾಮರ್ಥ್ಯ ಮತ್ತು ಪ್ರಧಾನಮಂತ್ರಿ ರೂಪಿಸಿದ ಆತ್ಮ ನಿರ್ಭರ ಭಾರತ್ ಪರಿಕಲ್ಪನೆಯನ್ನು ಸಹಕಾರ ಗೊಳಿಸುವಲ್ಲಿ ಸಾಧಿಸಿದ ಪ್ರಗತಿಯನ್ನು ಪ್ರದರ್ಶಿಸುತ್ತದೆ ಈ ಪ್ರದರ್ಶನವು ಏರೋ ಸ್ಪೇಸ್ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತದೆ ಎಂದು ರಾಜನಾಥ ಸಿಂಗ್ ಹೇಳಿದರು.