ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಹತ್ತು ದಿನಗಳ ಗಡುವು ನೀಡಿದೆ
ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿ ಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಪಿ ಐ ಎಲ್ ಸಲ್ಲಿಸಿದೆ.
ಮಂಗಳವಾರ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿಂದ ಪೀಠ ಅಡ್ವಕೇಟ್ ಜನರಲ್ ಪ್ರಭುಲಿಂಗ ರವರ ಮನವಿ ಮೇರೆಗೆ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ 10 ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಎರಡು ವಾರ ಮುಂದೂಡಿತು.
ಇದಕ್ಕೂ ಮುನ್ನ ಎಜೆ ಪ್ರಭುಲಿಂಗ ಕೆ ನಾವದಗಿ ವಾದ ಮಂಡಿಸಿ 2023ರ ಫೆಬ್ರವರಿ ಒಂದರೊಳಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಕ್ಕೆ ರಾಜಕೀಯ ಮೀಸಲಾತಿ ನಿಗದಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಆದೇಶಿಸಿತ್ತು 2023 ಜನವರಿ 30ರಂದು ಸೀಮಾ ನಿರ್ಣಯ ಆಯೋಗವು ಕ್ಷೇತ್ರ ಮರು ವಿಂಗಡಣಾ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ವರದಿಯು ಬೃಹತ್ ಗಾತ್ರದಲ್ಲಿದ್ದು ಅದನ್ನು ಇಲ್ಲಿ ಹಾಜರುಪಡಿಸಲಾಗಿಲ್ಲ ಸಚಿವ ಸಂಪುಟ ಮತ್ತು ಮುಖ್ಯಮಂತ್ರಿಗಳ ಅನುಮತಿ ಪಡೆಯಬೇಕಾಗಿರುವುದರಿಂದ ಅಧಿಸೂಚನೆ ಪ್ರಕಟಿಸುವುದು ತಡವಾಗಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದು ಅಧಿ ಸೂಚನೆ ಹೊರಡಿಸುವ ಔಪಚಾರಿಕತೆಯ ಬಾಕಿ ಉಳಿದಿದೆ.
ಮೀಸಲಾತಿ ವಿಚಾರ ಕುರಿತು ಚರ್ಚೆ
ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ರಾಜಕೀಯ ಪ್ರಾತಿನಿಧ್ಯ ಪರಿಗಣಿಸಿ ಮೀಸಲಾತಿ ಕಲ್ಪಿಸಲು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ ರಾಜಕೀಯ ಮೀಸಲಾತಿ ನಿಗದಿಪಡಿಸಲು ಮೇ 31 ರವರೆಗೆ ಸುಪ್ರೀಂಕೋರ್ಟ್ ಕಾಲಾವಕಾಶ ನೀಡಿದೆ ಅನಂತರ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಆಯೋಗವು ಚುನಾವಣೆ ನಡೆಸುವ ವಿಚಾರದಲ್ಲಿ ಮುಂದುವರಿಯಬಹುದು ಎಂದು ತಿಳಿಸಿದರು ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಯಾವಾಗ ಪ್ರಕಟಿಸಲಾಗುತ್ತದೆ ಎಂಬ ಸಿಜೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೆಜೆ ಇಂದಿನಿಂದ ಒಂದು ವಾರ ಹೆಚ್ಚೆಂದರೆ ಹತ್ತು ದಿನಗಳ ಒಳಗೆ ಅಧಿ ಸೂಚನೆ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಕ್ಷೆತ್ರ ಮರುವಿಂಗಡಣೆಗೆ ಸಂಬಂಧಿಸಿದ ಅಂತಿಮ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಿ ವರದಿಯನ್ನು ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶ ನ ಮುಂದೂಡಿತು.
ಜೊತೆಗೆ ಇತರ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ 2023 ಮಾರ್ಚ್ 31ರೊಳಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ರಚಿಸಿರುವ ಆಯೋಗಕ್ಕೆ 2020ರ ಡಿಸೆಂಬರ್ 12ರಂದು ಸುಪ್ರೀಂ ಕೋರ್ಟ್ ಹೇಳಿದೆ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿಚಾರದಲ್ಲೂ ರಾಜ್ಯ ಸರ್ಕಾರ ಅದರಂತೆ ಮುಂದುವರಿಯಬಹುದು ಎಂದು ನ್ಯಾಯಪೀಠ ಹೇಳಿದೆ.