ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಲ್ಲ: ಸಚಿವ ಕೋಟ

ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು ಗ್ರಾಮ ಪಂಚಾಯಿತಿಯು ಸ್ಥಳೀಯ ಪ್ರಾಧಿಕಾರವಾಗಿದೆ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದ ಮಾದರಿ ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿ ನಿಗದಿಪಡಿಸಿದ್ದು ಅದರಂತೆ ಮಂಜೂರಾದ ಹುದ್ದೆಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆದು ಗ್ರಾಮ ಪಂಚಾಯಿತಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ಖಾಯಂ ನೌಕರರಾಗಿರುತ್ತಾರೆ ಆದರೆ ಅವರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.

You May Also Like