ಫೆ.೨೬ರಂದು ಕಗ್ಗೆರೆ ತೋಂಟದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಮಹಾರಥೋತ್ಸವ

ಕುಣಿಗಲ್ ತಾಲ್ಲೂಕು ಕಗ್ಗೆರೆ ತೋಂಟದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ ೧೮, ೨೦೨೩ ರಿಂದ ಮಾರ್ಚ್ ೨, ೨೦೨೩ರವರೆಗೆ ಜರುಗಲಿದೆ.
ಜಾತ್ರೆಯ ಅಂಗವಾಗಿ ಫೆ.೧೮ರಂದು ಏಕಾದಶ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ ಮತ್ತು ಕ್ಷೀರಾಭಿಷೇಕ, ಫೆ.೨೦ರಂದು ಗಣಪತಿ ಪೂಜೆ ಮತ್ತು ಧ್ವಜಾರೋಹಣ, ಫೆ.೨೪ ರಂದು ಮಹಾರಥೋತ್ಸವಕ್ಕೆ ಕಳಸಾರೋಹಣ, ಫೆ.೨೫ರಂದು ಬೆಳಿಗ್ಗೆ ೧೧ ಗಂಟೆಗೆ ಕುಂಭಾಭಿಷೇಕ, ಫೆ.೨೬ ರಂದು ಮಧ್ಯಾಹ್ನ ೧೨ ಗಂಟೆಗೆ ಮಹಾರಥೋತ್ಸವ ಹಾಗೂ ರಾತ್ರಿ ಮುತ್ತಿನ ಪಲ್ಲಕ್ಕಿ ಉತ್ಸವ, ಮಾರ್ಚ್ ೧ರಂದು ರಾತ್ರಿ ೧೦ ಗಂಟೆಗೆ ಬೆಳ್ಳಿ ಪಲ್ಲಕ್ಕಿ ಉತ್ಸವ, ಮಾ. ೨ರಂದು ಸಂಜೆ ೫ ಗಂಟೆಗೆ ತೆಪ್ಪೋತ್ಸವ ಕಾರ್ಯಕ್ರಮಗಳಲ್ಲದೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಭಕ್ತಾದಿಗಳು ಪೂಜಾ ಕಾರ್ಯಕ್ರಮ, ಉತ್ಸವಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

You May Also Like