ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆ ಹಾಗೂ ವೈಯಕ್ತಿಕ ನೀರಾವರಿ ಯೋಜನೆಗೆ ಪ್ರವರ್ಗ-೧ರಡಿಯಲ್ಲಿ ಬರುವ ಉಪ್ಪಾರ ಮತ್ತು ಉಪಜಾತಿಗಳಿಗೆ ಒಳಪಡುವ ಅರ್ಹ ಪಲಾನುಭವಿಗಳಿಂದ ಸುವಿಧಾ ತಂತ್ರಾAಶದ (ಆನ್‌ಲೈನ್) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉಪ್ಪಾರ ಸಮಾಜದ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ೯೮ ಸಾವಿರ ಮತ್ತು ಪಟ್ಟಣ ಪ್ರದೇಶದವರಿಗೆ ೧ಲಕ್ಷ ೨೦ಸಾವಿರ ಒಳಗಿರಬೇಕು. ಅಂತಹ ಫಲಾನುಭವಿಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಕೊಳವೆ ಬಾವಿ ಕೊರೆಸಲು ಘಟಕ ವೆಚ್ಚ ೪ಲಕ್ಷವಿದ್ದು, ಇದರಲ್ಲಿ ೩.೫೦ಲಕ್ಷ ಸಹಾಯಧನ ಹಾಗೂ ೫೦ಸಾವಿರ ನಿಗಮದಿಂದ ಶೇ.೪ರ ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು ಅಂತಹ ರೈತರು ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವವರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ ೨ ಕಡೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ upparadevelopment.karnataka.gov.inನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.