ಬಜೆಟ್ ಕೃಷಿಗೆ ಏನೇನಿದೆ??

ಶಿಕ್ಷಣ ಉದ್ಯೋಗ ಮತ್ತು ಸಬಲೀಕರಣದ ಮಂತ್ರದೊಂದಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತರು ಮಹಿಳೆಯರು ಹಾಗೂ ಇತರ ದುರ್ಬಲ ವರ್ಗದವರು ಸ್ವಾಭಿಮಾನದ ಸ್ವಾವಲಂಬನೆಯ ಬದುಕಿಗೆ ಬೆಂಬಲ ನೀಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು 15 ರಿಂದ ಶೇಕಡಾ 15ಕ್ಕೆ ಹಾಗೂ ಮೂರರಿಂದ ಶೇಕಡ ಏಳಕ್ಕೆ ಹೆಚ್ಚಿಸುವ ಹಾಗೂ 24,000 ಕಾರ್ಮಿಕರ ಸೇವೆ ಕಾಯಂ ಮಾಡುವ ಐತಿಹಾಸಿಕ ಕ್ರಮಗಳನ್ನು ಕೈಗೊಂಡು ಜನರ ಅಭ್ಯುದಯ, ಅಗತ್ಯಗಳನ್ನು ಕೇಂಡಿಕರಿಸಿದ ಯೋಜನೆಗಳನ್ನು ಜಾರಿಗೊಳಿಸಿ ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸುವ ಮೂಲಕ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಸಾವಲತ್ತುಗಳನ್ನು ನೀಡುವ ಮೂಲಕ ಶ್ರಮಿಕರ ಕುರಿತು ಕಾಳಜಿ ಯನ್ನು ತೋರಲಾಗಿದೆ. ಆಸಿಡ್ ದಾಳಿ ಸಂತ್ರಸ್ತರ ಮಾಸಾಶನ 10,000 ಹೆಚ್ಚಳ ವಿವಿಧ ಮಾಸಾಶನಗಳ ಹೆಚ್ಚಳ ಜನರ ಮನೆ ಬಾಗಿಲಿಗೆ ಸೇವೆಗಳನ್ನು ಒದಗಿಸುವ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.

  • ಕೃಷಿಗೆ ಬಜೆಟ್ ನಲ್ಲಿ ಏನಿದೆ?

ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿ ಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಲಿದ್ದು ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ರಸ್ತೆಗೆ ಮತ್ತು ನೀಡಲಾಗುತ್ತಿದೆ ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ಕ್ರಮ ಕೈಗೊಳ್ಳುತ್ತಿದೆ.

ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರೈತರ ಆರ್ಥಿಕ ಸ್ಥಿತಿಯನ್ನು ಸದೃಢಗೊಳಿಸಲು ವಿವಿಧ ಕ್ರಮಗಳನ್ನು ಕೈಗೊಂಡಿದ್ದು ಬಿತ್ತನೆಯ ಹಂತದಿಂದ ಮಾರುಕಟ್ಟೆಯ ವರೆಗೆ ರೈತರ ಬೆಂಬಲಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀಡುತ್ತಿರುವ ನೆರವಿನ ಪ್ರಮುಖ ಅಂಶಗಳು:

  • ಪಿಎಂ ಕಿಸಾನ್ ಯೋಜನೆ ಅಡಿ ಕೇಂದ್ರ 10930 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 4822 ಕೋಟಿ ಒಟ್ಟಾರೆ 15752 ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ನೇರವಾಗಿ ಜಮೇ ಮಾಡಲಾಗಿದೆ.
  • ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ಒದಗಿಸಲಾಗಿದೆ.
  • ನೀರಾವರಿ ಪಂಪ್ ಸೆಟ್ ಗಳಿಗೆ 52590 ಕೋಟಿ ವಿದ್ಯುತ್ ಸಹಾಯಧನ ನೀಡಲಾಗಿದೆ
  • ಫಜಲ್ ಭೀಮಾ ಯೋಜನೆ ಅಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4900 ಕೋಟಿ ಪ್ರೀಮಿಯಂ ಪಾವತಿಸಲಾಗಿದೆ
  • ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಭತ್ತ ರಾಗಿ ಜೋಳ ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6650 ಕೋಟಿ ಒದಗಿಸಲಾಗಿದೆ.
  • ಬೆಳೆಗಳ ಸಂಸ್ಕರಣೆ ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ 175 ಕೋಟಿ ನೆರವು ನೀಡಲಾಗಿದೆ.
  • ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5245 ಕೋಟಿ ರೂ ವೆಚ್ಚ ಮಾಡಲಾಗಿದೆ
  • ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ 10.32 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 725 ಕೋಟಿ ರೂಗಳನ್ನು ನೀಡಲಾಗಿದೆ.
  • ಈ ವರ್ಷದಿಂದ ರೈತರಿಗೆ ನೀಡಲಾಗುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂಗಳಿಂದ 5 ಲಕ್ಷ ರೂಗಳಿಗೆ ಹೆಚ್ಚಿಸಲಾಗುವುದು ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂಗಳಷ್ಟು ಸಾಲ ವಿತರಿಸಲಾಗುವುದು.
  • ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ನೂತನ ಯೋಜನೆ ಅಡಿ 2023 24ನೇ ಸಾಲಿನಿಂದ 10,000 ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸ ಲಾಗಿದೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ ರಸಗೊಬ್ಬರ ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ ಈ ಮಟ್ಟದಲ್ಲಿ ರಾಜ್ಯ ಸರ್ಕಾರದ 2500 ಹಾಗೂ ನಬಾರ್ಡ್ ನಾ 200500 ಸೇರಿದ್ದು ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ

You May Also Like