ಕಳೆದ ಆಯವ್ಯಯದಲ್ಲಿ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳನ್ನು ಗುರುತಿಸಿ ಅಂತಹ ತಾಲೂಕುಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಟಿಕತೆ ಸಂಬಂಧಿಸಿದಗಳನ್ನು ರಾಜ್ಯ ಸರಾಸರಿಗಿಂತ ಹೆಚ್ಚು ಮಾಡಲು 3000 ಕೋಟಿ ರೂಗಳ ಯೋಜನೆಗಳನ್ನು ಘೋಷಿಸಲಾಗಿದೆ.
ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ ಆರೋಗ್ಯ ಹಾಗೂ ಪೌಷ್ಠಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರು ಸೇವೆಯನ್ನು ಗುರುತಿಸಿ ಅವರಿಗೆ ನೀಡುವ ಮಾಸಿಕ ಗೌರವ ಧನವನ್ನು ಸಾವಿರರೂ ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ 725 ಕೋಟಿ ರೂ ಮೊತ್ತವನ್ನು ನೀಡಲಾಗಿದೆ 2012 23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ದೂರಹಿತ ಕೃಷಿ ಕೂಲಿ ಕಾರ್ಮಿಕರು ನೇಕಾರರು ಮೀನುಗಾರರು ಎಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು ಹೆಚ್ಚುರಿಯಾಗಿ ಮೂರು ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ ಮೊತ್ತವನ್ನು ನೀಡಲಾಗಿದೆ ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು.
ರಾಜ್ಯದ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಇದರಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ ನೂರು ಕೋಟಿ ರೂ ವೆಚ್ಚದಲ್ಲಿ ಸಾವಿರ ಹೊಸ ಕಾರ್ಯಾಚರಣೆಗಳನ್ನು ಮಾಡಲು ಮಕ್ಕಳ ಬಸ್ಸು ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು ಇದರಿಂದ ಹೆಚ್ಚುವರಿಯಾಗಿ ಎರಡು ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ವಿವೇಕ ಯೋಜನೆ ಅಡಿಯಲ್ಲಿ 7601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು 1194 ಕೋಟಿ ರೂ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ 1955 ಕೊಠಡಿಗಳನ್ನು 382 ಕೋಟಿ ವೆಚ್ಚದಲ್ಲಿ ಅನುಮೋದಿಸಲಾಗಿದೆ.
ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆಯದ PM SHRI ಯನ್ನು ನೂರು ಕೋಟಿ ರೂ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ಅಂದಾಜು ವೆಚ್ಚದಲ್ಲಿ 7750 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಶೌಚಾಲಯಗಳ ಸಂಪೂರ್ಣ ಬೇಡಿಕೆಯನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಈ ಯೋಜನೆ ಅಡಿ ಮಾರ್ಚ್ 2023ರ ಅಂತ್ಯದಲ್ಲಿ 2169 ಶೌಚಾಲಯಗಳು ಪೂರ್ಣಗೊಳ್ಳಲಿವೆ ಉಳಿದ 5581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು ಇದಕ್ಕೆ ಒಟ್ಟು 80 ಕೋಟಿ ರೂ ಹಂಚಿಕೆ ಮಾಡಿದ್ದು ಅದರಲ್ಲಿ 50 ಕೋಟಿ ರೂಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ಒದಗಿಸಲಾಗಿದೆ.
ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಉತ್ತಮ ಪಡಿಸಲು 135 ಕೋಟಿ ರೂ ಅನುದಾನದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು.
ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.
ಹಳ್ಳಿ ಮುತ್ತು ಎಂಬ ಯೋಚನೆ ಅಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.
ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು ಅತ್ತು ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ ಇದರ ಅನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂಗಳಂತೆ ಪ್ರೋತ್ಸಾಹ ಧನ ನೀಡಲಾಗುವುದು.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಅನ್ನು ಪ್ರಾರಂಭಿಸಲಾಗುವುದು.
ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ದೇಶಕ್ಕಾಗಿ ಸಮರ್ಪಣಾ ಭಾವವನ್ನು ಮೂಡಿಸಲು ರಾಜ್ಯದಲ್ಲಿ ಈ ವರ್ಷ ಎರಡು ಹೊಸ ಎನ್ ಸಿ ಸಿ ಘಟಕಗಳನ್ನು ಸ್ಥಾಪಿಸಲಾಗುವುದು.
ಎಲ್ಲಾ ಜಿಲ್ಲೆಗಳಲ್ಲಿ Hand Held x-ray ಯಂತ್ರಗಳ ಸಹಾಯದಿಂದ ಕ್ಷಯರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ಪ್ರಸ್ತಾಪಿಸಲಾಗಿದೆ.
ಕ್ಯಾನ್ಸರ್ ರೋಗವು ಆರಂಭಿಕ ಹಂತದಲ್ಲಿಯೇ ಪತ್ತೆಯಾದರೆ ಸಕಾಲಿಕ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಿದೆ ಈ ಹಿನ್ನೆಲೆಯಲ್ಲಿ ಸ್ತನ ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ಜೀವಸುಧೆ ಎಂಬ ವ್ಯಾಪಕ ತಪಾಸಣಾ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುವುದು ಅಗತ್ಯವಿರುವವರಿಗೆ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ ಅನುದಾನ ಒದಗಿಸಲಾಗುವುದು.
ಹಿಂದಿನ ಆಯವ್ಯಯದಲ್ಲಿ ಘೋಷಿಸಿದಂತೆ ಉಚಿತ ಡಯಾಲಿಸಿ ಸೇವೆಯನ್ನು ಮೂವತ್ತು ಸಾವಿರ ಡಯಾಲಿಸಿಸ್ ಸೈಕಲ್ ಗಳಿಂದ 60,000 ಸೈಕಲ್ ಗಳಿಗೆ ಹೆಚ್ಚಿಸಲಾಗಿತ್ತು ಪ್ರಸಕ್ತ ಸಾಲಿನಲ್ಲಿ ಹೆಚ್ಚಿಸಲಾಗುವುದು.
ಸಾರ್ವಜನಿಕರಿಗೆ ಹಾಗೂ ಸ್ಥಳೀಯವಾಗಿಯೇ ಪ್ರಯೋಗಾಲಯಗಳ ಸೇವೆಗಳನ್ನು ಒದಗಿಸಲು 129 ತಾಲ್ಲೂಕು ಪ್ರಯೋಗಾಲಯಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಪ್ರಯೋಗಾಲಯಗಳನ್ನು ಹಾಗೂ ಬೆಂಗಳೂರಿನಲ್ಲಿ ರಾಜ್ಯ ರೆಫೆರಲ್ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.