ಫೆಬ್ರವರಿ ಅಂತ್ಯಕ್ಕೆ ಫಲಾನುಭವಿಗಳ ಸಮಾವೇಶ

ಜಿಲ್ಲೆಯಲ್ಲಿ ಫೆಬ್ರವರಿ ಅಂತ್ಯಕ್ಕೆ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಮಾವೇಶ ಕಾರ್ಯಕ್ರಮವನ್ನು ನಡೆಸಲಾಗುವುದು. ಸಮಾವೇಶದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡಲಾಗುವುದು ಎಂದರು.
ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ನಿಗಮಗಳು ನೀಡುವ ಸಾಲ-ಸಹಾಯಧನ, ರೈತ ವಿದ್ಯಾನಿಧಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಕಾನೂನು ತರಬೇತಿ ಹಾಗೂ ಮತ್ತಿತರ ಸೌಲಭ್ಯಗಳಿಗಾಗಿ ಫಲಾನುಭವಿಗಳ ಆಯ್ಕೆ ಬಾಕಿಯಿದ್ದಲ್ಲಿ ಕೂಡಲೇ ಆಯ್ಕೆ ಮಾಡಿ ಇಲಾಖಾವಾರು ಪಟ್ಟಿಯನ್ನು ತುರ್ತಾಗಿ ಸಲ್ಲಿಸಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಫೆಬ್ರವರಿ ಮಾಹೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆಯಿದ್ದು, ನಗರದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಕಟ್ಟಡ ಹಾಗೂ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಕೆ. ವಿದ್ಯಾಕುಮಾರಿ ಮಾತನಾಡಿ ಇಲಾಖಾಧಿಕಾರಿಗಳು ನಿಗಧಿತ ನಮೂನೆಯಲ್ಲಿ ೨೦೨೨-೨೩ನೇ ಸಾಲಿಗೆ ಸಂಬAಧಿಸಿದAತೆ ತಮ್ಮ ಇಲಾಖೆಗೆ ನಿಗಧಿಯಾಗಿ ಈವರೆಗೂ ಫಲಾನುಭವಿಗಳನ್ನು ಆಯ್ಕೆ ಮಾಡದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಕೂಡಲೇ ಆರ್ಥಿಕ ವಿವರ ಸೇರಿದಂತೆ ಮಾಹಿತಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಮಾತನಾಡಿ ಜಿಲ್ಲೆಯಲ್ಲಿ ಮಾರ್ಚ್ ೩, ೪ ಮತ್ತು ೫ರಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯ ಮಂತ್ರಿಗಳು ಕ್ರೀಡಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರಲ್ಲದೆ, ೨೪ ವರ್ಷಗಳ ಹಿಂದೆ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ೬೦೦೦ ಮಹಿಳಾ ಕ್ರೀಡಾಪಟುಗಳು ಸೇರಿದಂತೆ ಸುಮಾರು ೧೦,೦೦೦ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಪಟುಗಳ ವಾಸ್ತವ್ಯಕ್ಕಾಗಿ ಜಿಲ್ಲಾ ಕ್ರೀಡಾಂಗಣ, ವಿಶ್ವವಿದ್ಯಾನಿಲಯ, ಎಸ್‌ಎಸ್‌ಐಟಿ, ಎಸ್‌ಐಟಿ ಕಾಲೇಜು ಸೇರಿದಂತೆ ಸರ್ಕಾರಿ ಜೂನಿಯರ್ ಕಾಲೇಜನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ವಿಕಲಚೇತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪಾನಾ, ಕಾರ್ಮಿಕ ಇಲಾಖೆ, ವಿವಿಧ ನಿಗಮಗಳು, ಜಿಲ್ಲಾ ಪಂಚಾಯತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

You May Also Like