ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು LIVLONG INSURANCE BROKERS LIMITED FORMERLY ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬAಧ ನಿರುದ್ಯೋಗಿಗಳಿಗೆ ಫೆಬ್ರವರಿ ೨೩ರಂದು ನೇರ ಸಂದರ್ಶನ ನಡೆಯಲಿದ್ದು, ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಫೆಬ್ರವರಿ ೨೩, ೨೦೨೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಡಿ.ಸಿ.ಸಿ. ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೧೬-೨೨೭೮೪೮೮ನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.