ಶಿಕ್ಷಣ ಎಂಬುದು ಪ್ರತಿಯೊಬ್ಬರಿಗೂ ಮುಂದಿನ ಜೀವನಕ್ಕೆ ಅಡಿಪಾಯವಿದ್ದಂತೆ ಆದರೆ ಇಂದು ಅದು ಕೇವಲ ಉದ್ಯಮವಾಗಿ ಪರಿಣಮಿಸುತ್ತಿದೆ. ಇದರಿಂದ ಇಂದಿನ ಯುವಜನತೆ ತಮ್ಮ ಜೀವನದ ಹಾದಿಯನ್ನು ಆರಿಸಿಕೊಳ್ಳುವಲ್ಲಿ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇದರ ಜೊತೆಗೆ ಶಿಕ್ಷಣದಲ್ಲಿ ಗುಣಮಟ್ಟವೂ ಕುಂದುತ್ತಾ ಬಂದಿರುವುದು ವಿಪರ್ಯಾಸ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೈಗಳ್ಳರಾಗುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಪಾಸು ಮಾಡಲು ಹಲವು ಅಡ್ಡದಾರಿಗಳನ್ನು ಹಿಡಿಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಪ್ರಥಮ ಪಿಯು ಪ್ರಶ್ನೆಪತ್ರಿಕೆ ಸರಣಿ ಸೋರಿಕೆ ಖಂಡಿಸಿ ಎಐಡಿಎಸ್‌ಓ ತುಮಕೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಡಿಡಿಪಿಯು ಇಲಾಖೆಗೆ ಮನವಿಪತ್ರ ಸಲ್ಲಿಸಲಾಯಿತು. ಮತ್ತೆ ಇಂತಹ ಲೋಪಗಳು ಮರುಕಳಿಸದಂತೆ ಇಲಾಖೆ ಸೂಕ್ತ ಕ್ರಮವಹಿಸಬೇಕು. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳಬೇಕು. ಮತ್ತು ಈ ಘಟನೆಯಲ್ಲಿ ಭಾಗಿಯಾದವರಿಗೆ ಸೂಕ್ತ ಶಿಕ್ಷೆ ನೀಡಬೇಕೆಂದು ಆಗ್ರಹಿಸಲಾಯಿತು.
ಸರ್ಕಾರವು ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ.