ತುಮಕೂರು(ಕ.ವಾ) ಫೆ.೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ ೨೪ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಯುವ ಜನಾಂಗದಲ್ಲಿ ಅರಿವು ಮೂಡಿಸಲು ‘ಜಿಲ್ಲಾ ಮಟ್ಟದ ಯುವ ಮೇಳ ಕಾರ್ಯಕ್ರಮ’ ಹಾಗೂ ಬಾಲ್ಯ ವಿವಾಹಕ್ಕೆ ಕಾರಣಗಳು, ದುಷ್ಪರಿಣಾಮಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು ‘ಅರಿವು ಕಾರ್ಯಕ್ರಮ’ವನ್ನು ಆಯೋಜಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ವಿವಿಧ ಸಚಿವರು, ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು.