ತುಮಕೂರು: ಕೃಷಿ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ಸೂಕ್ಷö್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಶೇ.೯೦ರಷ್ಟು ರಿಯಾಯತಿ ದರದಲ್ಲಿ ತುಂತುರು ನೀರಾವರಿ ಘಟಕಗಳನ್ನು ವಿತರಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಪಹಣಿ, ಆಧಾರ್‌ಕಾರ್ಡ್ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಪುಸ್ತಕದ e಼ೆರಾಕ್ಸ್ ಪ್ರತಿ, ಬೆಳೆ ಹಾಗೂ ಕೊಳವೆ ಬಾವಿ ದೃಢೀಕರಣ ಪತ್ರಗಳ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ತುಮಕೂರು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.