ನಗದು ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಸಾಂಧರ್ಬಿಕ ಚಿತ್ರ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರದಿಂದ ನಗದು ಪುರಸ್ಕಾರವನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಪದಕ ವಿಜೇತ ಅಂತರರಾಷ್ಟ್ರೀಯ ಕ್ರೀಡಾಪಟುಗಳು ತಮ್ಮ ಅರ್ಜಿಯನ್ನು ಏಪ್ರಿಲ್ ೩೦ರೊಳಗಾಗಿ DBT-MIS Portal (https://dbtvas-sports.gov.in)  ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಅಥವಾ ದೂರವಾಣಿ ಸಂಖ್ಯೆ: ೦೮೧೬-೨೨೭೮೧೨೪ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like