ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಅಭಿವೃದ್ಧಿಗಾಗಿ ಗಣನೀಯವಾಗಿ ಸೇವೆ ಸಲ್ಲಿಸಿದಂತಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಯನ್ನು ಏಪ್ರಿಲ್ ೫ರಂದು ಆಚರಿಸುವ ಡಾ: ಬಾಬು ಜಗಜೀವನರಾಂ ಅವರ ೧೧೬ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ ೧೪ರಂದು ಆಚರಿಸುವ ಡಾ; ಬಿ.ಆರ್. ಅಂಬೇಡ್ಕರ್ ಅವರ ೧೩೨ನೇ ಜನ್ಮದಿನಾಚರಣೆಯ ದಿನದಂದು ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಆಸಕ್ತರು ಮಾರ್ಚ್ ೨೦ರೊಳಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇರ್ಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿದೇರ್ಶಕ ಎಸ್. ಕೃಷ್ಣಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like