ಇಂದಿನಿಂದ ಸಿಇಟಿ ಗೆ ಅರ್ಜಿ ಸಲ್ಲಿಕೆ ಆರಂಭ

 

ಇಂಜಿನಿಯರಿಂಗ್ ಪಶು ವೈದ್ಯಕೀಯ ಕೃಷಿ ವಿಜ್ಞಾನ ಸೇರಿದಂತೆ 202324ನೇ ಸಾಲಿನ ಸರ್ಕಾರಿ ಸೀಟು ಪ್ರವೇಶಕ್ಕೆ 20 ಮತ್ತು 21 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾರ್ಚ್ ಎರಡರ ಗುರುವಾರದಿಂದ ಏಪ್ರಿಲ್ ಏಳರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬುಧವಾರ ಅಧಿಕೃತವಾಗಿ ಸಿಇಟಿ ವೇಳಾಪಟ್ಟಿ ಪ್ರಕಟಣೆಯೊಂದಿಗೆ ಅರ್ಜಿ ಸಲ್ಲಿಕೆ ಕುರಿತಾದ ಸಂಪೂರ್ಣ ಮಾಹಿತಿ ನೀಡಿದೆ. ಆ ಪ್ರಕಾರ ಮೇ 20ರ ಶನಿವಾರ ಬೆಳಗ್ಗೆ 10:30 ರಿಂದ 11:50 ರವರೆಗೆ ಜೀವಶಾಸ್ತ್ರ ಮಧ್ಯಾಹ್ನ 2:30 ರಿಂದ 3:50 ರವರೆಗೆ ಗಣಿತ ಮೇ 21ರ ಭಾನುವಾರ ಬೆಳಗ್ಗೆ ಭೌತಶಾಸ್ತ್ರ ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ ಮೇ 22ರಂದು ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:30 ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು ಬೀದರ್, ಬೆಳಗಾವಿ ಬಳ್ಳಾರಿ ವಿಜಯಪುರ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಮಾತ್ರ ನಡೆಯಲಿದೆ ಗುರುವಾರ ಬೆಳಗ್ಗೆ 11 ಗಂಟೆಯಿಂದ ಸಿಇಟಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಏಪ್ರಿಲ್ ಏಳು ಅರ್ಜಿ ಸಲ್ಲಿಸಲು ಕೊನೆಯ ದಿನ.

You May Also Like