ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಕುರಿತು ಬಿಜೆಪಿ ಸಂಸದರಿಂದ ಪರೋಕ್ಷ ಸುಳಿವು

BIG NEWS: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಕುರಿತು ಬಿಜೆಪಿ ಸಂಸದರಿಂದ ಪರೋಕ್ಷ ಸುಳಿವು

ರಾಜ್ಯ ವಿಧಾನಸಭಾ ಚುನಾವಣೆಗೆ ಸದ್ಯದಲ್ಲಿಯೇ ದಿನಾಂಕ ಘೋಷಣೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೀಗ ದಾವಣಗೆರೆ ಸಂಸದ ಸಿದ್ದೇಶ್ವರ ಈ ಕುರಿತಂತೆ ಪರೋಕ್ಷ ಸುಳಿವು ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 25ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಗೆ ಆಗಮಿಸಲಿದ್ದು, ಇದಾದ ಬಳಿಕ ಚುನಾವಣೆಗೆ ಹೋಗುತ್ತೇವೆ ಎಂದಿದ್ದಾರೆ.

ಈ ಮೂಲಕ ಮಾರ್ಚ್ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎನ್ನಲಾಗುತ್ತಿದ್ದು, ಅದಾದ ಬಳಿಕ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಕಾರಣ ಅಷ್ಟರೊಳಗಾಗಿ ಕೆಲವೊಂದು ಉದ್ಘಾಟನಾ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಮೂಲಕ ಉದ್ಘಾಟಿಸಿ ಸಮಾವೇಶ ನಡೆಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ.

ಮೇ 24, 2023 ಕ್ಕೆ ಪ್ರಸ್ತುತ ವಿಧಾನಸಭೆಯ ಅವಧಿ ಮುಕ್ತಾಯವಾಗಲಿದ್ದು, ಅಷ್ಟರೊಳಗಾಗಿಯೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 10 ಅಥವಾ 12ಕ್ಕೆ ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎನ್ನಲಾಗುತ್ತಿದೆ. ಈ ಮೊದಲು ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಬಹುದು ಎಂದು ಊಹಿಸಲಾಗಿದ್ದರೂ ಬಿಜೆಪಿ ನಾಯಕರುಗಳು ಹೇಳುತ್ತಿರುವ ಪ್ರಕಾರ ಅದಕ್ಕೂ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆ ಇದೆ.

You May Also Like