ಕಚೇರಿ ಸ್ಥಳಾಂತರ

ನಗರದ ಈದ್ಗಾಮೊಹಲ್ಲಾ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಮಾಹಿತಿ ಕೇಂದ್ರವನ್ನು ಉಪ್ಪಾರಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಮೌಲಾನಾ ಆಜಾದ್ ಭವನಕ್ಕೆ ಸ್ಥಳಾಂತರಿಸಲಾಗಿದೆ.
ಮೇಲ್ಕಂಡ ಕಚೇರಿಗಳಿಗೆ ಪತ್ರ ವ್ಯವಹಾರ ನಡೆಸುವವರು ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-572102 ಈ ವಿಳಾಸದಲ್ಲಿ ವ್ಯವಹರಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2273724ನ್ನು ಸಂಪರ್ಕಿಸಬೇಕೆAದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೇದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like