ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಆವರಣ ತುಮಕೂರು ಇಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿದೆ.
ದಿನಾಚರಣೆಯ ಅಂಗವಾಗಿ 1 ವಾರಗಳ ಕಾಲ ಡೇ-ನಲ್ಮ್ ಅಭಿಯಾನದಡಿ ರಚಿತವಾಗಿರುವ ಸ್ವಸಹಾಯ ಸಂಘಗಳ ಸದಸ್ಯರು ಉತ್ಪಾದಿಸುವ ಕೃತಕ ಆಭರಣ, ಕೈ ಮಗ್ಗದ ಸೀರೆ, ಮಣ್ಣಿನ ಗೃಹೋಪಯೋಗಿ ವಸ್ತುಗಳು, ಸಿರಿಧಾನ್ಯ ಉತ್ಪನ್ನಗಳು, ಆಹಾರ ಪದಾರ್ಥಗಳು, ವೈರ್‌ಬ್ಯಾಗ್ ಇತ್ಯಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.
ಸಾರ್ವಜನಿಕರು ಈ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ತುಮಕೂರು ನಗರದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಉತ್ಪಾದಿಸುವ ಪದಾರ್ಥಗಳನ್ನು ಖರೀದಿಸುವ ಮೂಲಕ, ಸ್ವಸಹಾಯ ಸಂಘದ ಸದಸ್ಯರಿಗೆ ಪ್ರೋತ್ಸಾಹ ನೀಡಬೇಕೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಕೆ.ಶ್ರೀನಿವಾಸ ತಿಳಿಸಿದ್ದಾರೆ.