ಎಲ್ಲೋ ಬೋರ್ಡ್ ಟ್ಯಾಕ್ಸಿ/ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಸೌಲಭ್ಯ

ತುಮಕೂರು : ರಾಜ್ಯ ಸರ್ಕಾರವು ಎಲ್ಲೋ ಬೋರ್ಡ್(Yellow board) ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಸೌಲಭ್ಯವನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಫಲಾನುಭವಿಗಳು ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು ಮನವಿ ಮಾಡಿದ್ದಾರೆ.
ಎಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಈ ಯೋಜನೆಯು 2022-23ನೇ ಸಾಲಿನ ಆರ್ಥಿಕ ವರ್ಷದಿಂದ ಅನ್ವಯವಾಗುತ್ತದೆ.
ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ರೂಪದಲ್ಲಿ ವಿದ್ಯಾರ್ಥಿ ವೇತನವನ್ನು ಪಾವತಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಯನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾ0ಶ ಅಥವಾ ಮಾರ್ಚ್ 18ರೊಳಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ತುಮಕೂರು ಇಲ್ಲಿಗೆ ಭೇಟಿ ನೀಡಿ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

You May Also Like