ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ವು ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರ ಹುದ್ದೆಯನ್ನು ಭರ್ತಿ ಮಾಡಲು ಎಂಟೆಕ್ ಮೆಕ್ಯಾನಿಕಲ್ ಸ್ನಾತಕೋತ್ತರ ಪದವಿ ಮತ್ತು ಡಿಟಿಡಿಎಂ ವ್ಯಾಸಂಗ ಮಾಡಿರುವ ಕನಿಷ್ಟ 2 ವರ್ಷ ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಮಾರ್ಚ್ 13ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು-572168 ಅಥವಾ ದೂ.ವಾ.ಸಂ. 0816-2243396/ ಮೊ.ಸಂ. 9916769649ನ್ನು ಸಂಪರ್ಕಿಸಬೇಕೆAದು ಪ್ರಕಟಣೆ ತಿಳಿಸಿದೆ.

You May Also Like