ಅಪರಿಚಿತ ವ್ಯಕ್ತಿ ಶವ ಪತ್ತೆ

ತುಮಕೂರು: ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆ ಮೈದಾನದ ಬನ್ನಿ ಮರದ ಕಟ್ಟೆಯ ಮೇಲೆ ಫೆಬ್ರವರಿ 16 ರಂದು ಬೆಳಗ್ಗೆ 9.30ರ ಸಮಯದಲ್ಲಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.
ಮೃತ ವ್ಯಕ್ತಿಯು ಭಿಕ್ಷÄಕನಂತೆ ಕಂಡು ಬರುತ್ತಿದ್ದು, ಯಾವುದೋ ಖಾಯಿಲೆಯಿಂದ ಅಸ್ವಸ್ಥನಾಗಿ ಮೃತಪಟ್ಟಿರಬಹುದು. ಈತನು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಮೈಮೇಲೆ ರೆಡಿಮೇಡ್ ಹಳದಿ ಬಣ್ಣದ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಇರುತ್ತದೆ. ಈತನ ವಾರಸುದಾರರ ಬಗ್ಗೆ ಮಾಹಿತಿ ದೊರೆತವರು ಕ್ಯಾತ್ಸಂದ್ರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0816-2281124/ 2281120/ 2272340/ 2278000 ಅಥವಾ ಮೊ.ಸಂ. 9480802952-33-20-00ಯನ್ನು ಸಂಪರ್ಕಿಸಬೇಕೆAದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.

You May Also Like