ತುಮಕೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾರ್ಚ್ 13ರ ಬೆಳಿಗ್ಗೆ 8 ಗಂಟೆಗೆ ನಗರದ ಸತ್ಯಮಂಗಲ ಹಾಗೂ ಬೆಳಿಗ್ಗೆ 8.30 ಗಂಟೆಗೆ ಬಿದಿರುಮೆಳೆ ತೋಟದಲ್ಲಿ “ನಮ್ಮ ಕ್ಲಿನಿಕ್” ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ. ನಾಗೇಶ್ ಸೇರಿದಂತೆ ಸ್ಥಳೀಯ ಶಾಸಕರು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಡಿ.ಎನ್. ಮಂಜುನಾಥ್ ತಿಳಿಸಿದ್ದಾರೆ.