ತುಮಕೂರು: ತುಮಕೂರು ನಗರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 11 ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಏಪ್ರಿಲ್ 5ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತುಮಕೂರು ನಗರ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2955399ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಊರುಕೆರೆ, ಉಪ್ಪಾರಹಳ್ಳಿ-4 ಹಾಗೂ ನಜûರಬಾದ್-2 ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.
ಮಲ್ಲಸಂದ್ರ ಗೊಲ್ಲರಹಟ್ಟಿ, ಹಬ್ಬತ್ತನಹಳ್ಳಿ, ಲಿಂಗಾಪುರ, ಸಂತೆಪೇಟೆ, ಡಿ.ಎಂ.ಪಾಳ್ಯ, ವೀರಸಾಗರ-2, ಉಪ್ಪಾರಹಳ್ಳಿ-1, ದೇವರಾಯಪಟ್ಟಣ, ದಿಬ್ಬೂರು-1, ಭೀಮಸಂದ್ರ ಹಾಗೂ ಪಿ.ಹೆಚ್.ಕಾಲೋನಿ-4 ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.