ಬೆಂಗಳೂರು : ರಾಜ್ಯ ಸರ್ಕಾರವು ತಿಗಳ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ತಿಗಳ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದೆ.
ತಿಗಳ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಮಂಗಳವಾರ ತಿಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದ್ದು, ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2 ಎನಲ್ಲಿ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಕಲ್ಪಿಸಿ ಆದೇಶಿಸಲಾಗಿದೆ.
ತಿಗಳ, ಅಗ್ನಿವಂಶ, ಅಗ್ನಿವನ್ನಿ, ಅಗ್ನಿ ಕುಲ ಕ್ಷತ್ರಿಯ, ಧರ್ಮರಾಜ ಕಾಪು, ಪಳ್ಳಿ, ಶಂಭುಕುಲ ಕ್ಷತ್ರಿಯ, ತಿಗಳ, ವನ್ನಿಯರ್, ವನ್ನಿಕುಲ ಕ್ಷತ್ರಿಯ, ತಿಗ್ಲರ್, ಕುರೋವನ್ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ತಿಗಳ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.