ಅಪರಿಚಿತ ಮಹಿಳೆ ಮೃತದೇಹ ಪತ್ತೆ

ತುಮಕೂರು: ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿ ಕೊರಟಗೆರೆ ತಾಲ್ಲೂಕು ತುಂಬಾಡಿ ಗ್ರಾಮದ ಕೆರೆಯ ನೀರಿನಲ್ಲಿ ಸುಮಾರು 50 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈಕೆಯ ವಾರಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಿರುವುದಿಲ್ಲ.

ಮಹಿಳೆಯ ಮೃತ ದೇಹವು ಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದು, ನಾಲಿಗೆ ಹೊರ ಬಂದಿರುತ್ತದೆ. ಮೈಮೇಲೆ ಕೆಂಪು ಬಣ್ಣದ ಸೀರೆ, ಹಸಿರು ಬಣ್ಣದ ಲಂಗ, ಕಪ್ಪು ಬಣ್ಣದ ರವಿಕೆ ಇರುತ್ತದೆ. ಎರಡೂ ಕೈಗಳಲ್ಲಿ ಅಣ್ಣ ಎಂಬ ಅಚ್ಚೆ ಇರುತ್ತದೆ. ಈಕೆಯ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 0816-2278000/ 08138-232136/ 08137-282378 ಅಥವಾ ಮೊ.ಸಂ.9480802988-54-00ಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

You May Also Like