ಕರ್ನಾಟಕ ವಿಧಾನಸಭೆ ಚುನಾವಣೆ : ನಾಳೆಯೇ 150 ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ

BIGG NEWS : ಕರ್ನಾಟಕ ವಿಧಾನಸಭೆ ಚುನಾವಣೆ : ನಾಳೆಯೇ 150 ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ

ಬೆಂಗಳೂರು : ಮಾರ್ಚ್ 17 ರಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯ ಬಳಿಕ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ನವದೆಹಲಿಯಲ್ಲಿ ಮಾರ್ಚ್ 17 ರಂದು ಕಾಂಗ್ರೆಸ್ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಯಲಿದ್ದು, ಸಭೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್ ಹೋಗಲಿದ್ದು, ಸಭೆಯ ಬಳಿಕ ಸುಮಾರು 150 ಕ್ಷೇತ್ರಗಳ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್, ಈಗಾಗಲೇ ಗೆಲ್ಲುವ ಕ್ಷೇತ್ರಗಳ ಸರ್ವೆ ಮಾಡಿದ್ದು, ಸುಮಾರು 150 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಮಾರ್ಚ್ 17 ರಂದು                                                                                                                            ನಡೆಯುವ ಕೇಂದ್ರ ಚುನಾವಣೆ ಸಮಿತಿ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ                                                                                                                              ಪಟ್ಟಿ ಬಿಡುಗಡೆ ಮಾಡಲು ರಾಜ್ಯ ಕಾಂಗ್ರೆಸ್ ಸಿದ್ಧತೆ ನಡೆಸಿದೆ.

You May Also Like