ಶಿಕ್ಷಕರಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ

ಶಿಕ್ಷಕರಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ

ಬೆಂಗಳೂರು: ಚುನಾವಣೆ ಆಯೋಗದ ಅನುಮತಿಯೊಂದಿಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪದದಲ್ಲಿ ಇರುವುದರಿಂದ ನೀತಿ ಸಂಹಿತೆ ಜಾರಿಯಾದರೆ ವರ್ಗಾವಣೆ ನಡೆಯುವುದಿಲ್ಲ ಎನ್ನುವ ಆತಂಕ ಶಿಕ್ಷಕರಲ್ಲಿತ್ತು.

ಸಂಪುಟ ಸಭೆಯಲ್ಲಿ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ ನೀಡಲು ಒಪ್ಪಿಗೆ ನೀಡಲಾಗಿದ್ದು, ಇದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೂ ಶಿಕ್ಷಕರ ವರ್ಗಾವಣೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ನಿರ್ಧಾರದಿಂದ ಶಿಕ್ಷಕರ ವರ್ಗಾವಣೆಯ ಕನಸು ನನಸಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದು, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

You May Also Like