ಇದೇ ಮೊದಲ ಬಾರಿಗೆ ಇಂದಿನಿಂದ 5,8 ನೇ ತರಗತಿ `ಬೋರ್ಡ್ ಪರೀಕ್ಷೆ’ : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

BIGG NEWS : ಇದೇ ಮೊದಲ ಬಾರಿಗೆ ಇಂದಿನಿಂದ 5,8 ನೇ ತರಗತಿ `ಬೋರ್ಡ್ ಪರೀಕ್ಷೆ' : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

(ಸಾಂದರ್ಭಿಕ ಚಿತ್ರ)

ಬೆಂಗಳೂರು : ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಂಡಳಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಎಲ್ಲ ಶಾಲೆಗಳಿಗೂ ರವಾನಿಸಲಿದೆ.

ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.

5, 8 ನೇ ತರಗತಿಗೆ ಮಾರ್ಚ್ 27 ರ ಇಂದಿನಿಂದ ಏಪ್ರಿಲ್, 01 ರವರೆಗೆ ಮೌಲ್ಯಾಂಕನ ನಡೆಯಲಿದೆ. 5 ಮತ್ತು 8 ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.

5 ಮತ್ತು 8 ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿ ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆ ಸಿದ್ದಪಡಿಸಲಾಗಿದೆ.

ಹೀಗಿದೆ ವಿಷಯವಾರು ಪರೀಕ್ಷೆ ವೇಳಾಪಟ್ಟಿ

5ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ

ದಿನಾಂಕ 27-03-2023ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು

ದಿನಾಂಕ 28-03-2023ರ ಮಂಗಳವಾರ – ದ್ವಿತೀಯ ಭಾಷೆ – ಕನ್ನಡ, ಇಂಗ್ಲೀಷ್

ದಿನಾಂಕ 29-03-2023ರ ಬುಧವಾರ – ಕೋರ್ ವಿಷಯ – ಪರಿಸರ ಅಧ್ಯಯನ

ದಿನಾಂಕ 30-03-2023ರ ಗುರುವಾರ – ಕೋರ್ ವಿಷಯ – ಗಣಿತ

8ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ

ದಿನಾಂಕ 27-03-2023ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್ ( NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ

ದಿನಾಂಕ 28-03-2023ರ ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

ದಿನಾಂಕ 29-03-2023ರ ಬುಧವಾರ – ತೃತೀಯ ಭಾಷೆ – ಹಿಂದಿ, ಹಿಂದಿ ( NCERT), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

ದಿನಾಂಕ 30-03-2023ರ ಗುರುವಾರ – ಕೋರ್ ವಿಷಯ – ಗಣಿತ

ದಿನಾಂಕ 31-03-2023ರ ಶುಕ್ರವಾರ – ಕೋರ್ ವಿಷಯ – ವಿಜ್ಞಾನ.

ದಿನಾಂಕ 01-04-2023ರ ಶನಿವಾರ – ಕೋರ್ ವಿಷಯ – ಸಮಾಜ ವಿಜ್ಞಾನ.

ಅಂದಹಾಗೇ ದಿನಾಂಕ 30-03-2023ರಂದು ನಡೆಯುವ ಗಣಿತ ವಿಷಯದ ಮೌಲ್ಯಾಂಕನದ ಅವಧಿಯನ್ನು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ದಿನಗಳ ಮೌಲ್ಯಾಂಕನವು ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿದೆ.
ದಿನವೊಂದಕ್ಕೆ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುತ್ತದೆ. ಪ್ರತಿ ವಿಷಯದ ಮೌಲ್ಯಾಂಕನಕ್ಕೆ 2 ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ.

You May Also Like