ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಇಂದು ಸ್ಮಾರಕ ಲೋಕಾರ್ಪಣೆ

Cinemaazi

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರೆಬಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿದ್ದ ಅಂಬರೀಶ್ ಅವರ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮ ಮಾರ್ಚ್ 27 ರಂದು ಸಂಜೆ 6 ಗಂಟೆಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಯಲಿದೆ.

12 ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. 1.34 ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ಅಂಬರೀಶ್ ಅವರ ಕಂಚಿನ ಪುತ್ಥಳಿ ಸ್ಥಾಪಿಸಲಾಗಿದೆ. ಸಮಾಧಿ ಸ್ಥಳದಲ್ಲಿ 43 ಅಡಿ ಎತ್ತರದ ರಚನೆ, ನೀರಿನ ಕಾರಂಜಿ, ಮ್ಯೂಸಿಯಂ, ಹೂದೋಟ, ದೀಪಾಲಂಕಾರ ಒಳಗೊಂಡಿದೆ.

ಇಂದು ಸಂಜೆ ಉದ್ಘಾಟನೆ ಸಮಾರಂಭ ನಡೆಯಲಿದ್ದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವ ಕೆ. ಗೋಪಾಲಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಡಿ.ವಿ. ಸದಾನಂದ ಗೌಡ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ನಟ ಅಭಿಷೇಕ್ ಅಂಬರೀಶ್ ಭಾಗವಹಿಸಲಿದ್ದಾರೆ.

You May Also Like