ಚುನಾವಣಾ ನೀತಿ ಸಂಹಿತೆ ಜಾರಿ , ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹೈ ಅಲರ್ಟ್

BIGG NEWS : ಚುನಾವಣಾ ನೀತಿ ಸಂಹಿತೆ ಜಾರಿ , ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹೈ ಅಲರ್ಟ್

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ.

ರಾಜ್ಯದ ಎಲ್ಲಾ ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಿಯೇ ಬಿಡುತ್ತಿದ್ದಾರೆ.

ವಾಹನ ಸವಾರರು ತಮ್ಮ ತಮ್ಮ ವಾಹನದ ಸರಿಯಾದ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡು ಪೊಲೀಸರು ಕೇಳಿದ ಸಮಯದಲ್ಲಿ ನೀಡಬೇಕು. ಅದೇ ರೀತಿ ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕೊಂಡೊಯ್ಯುವಾಗ ಸೂಕ್ತ ದಾಖಲೆಗಳೊಂದಿಗೆ ಪ್ರಯಾಣಿಸುವುದು ಒಳಿತು.

ಯಾದಗಿರಿಯಲ್ಲಿ ಪೊಲೀಸರು ಫುಲ್ ಅಲರ್ಟ್

ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಯಾದಗಿರಿಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು, 18 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.ಮತದಾರರಿಗೆ ಹಂಚಲು ಅಕ್ರಮ ಹಣ, ಮದ್ಯ, ವಸ್ತುಗಳನ್ನು ಸಾಗಾಟ ಮಾಡುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಹಿನ್ನೆಲೆ ಯಾದಗಿರಿಯಲ್ಲಿ 18 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.ಪೊಲೀಸರು ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡುತ್ತಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.ಈ ಹಿನ್ನೆಲೆ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿಯ ಚೆಕ್ಪೋಸ್ಟ್ನಲ್ಲಿ ಬೆಂಗಳೂರಿಗೆ ಆಗಮಿಸುವ ಎಲ್ಲಾ ವಾಹನ ತಪಾಸಣೆ ಮಾಡುತ್ತಿದ್ದಾರೆ.ಅದೇ ರೀತಿ ಗದಗ ಜಿಲ್ಲೆಯ ವಿವಿಧೆಡೆ ಹಾಕಿದ್ದ, ಶಾಸಕರು ಹಾಗೂ ನಾಯಕರ ಕಟೌಟ್ ಬ್ಯಾನರ್ ತೆರವು ಮಾಡಿದ್ದಾರೆ. ಸರಕಾರದ ಕಾರ್ಯಕ್ರಮಗಳ ಬ್ಯಾನರ್ ಗಳು, ಸಚಿವರ, ಶಾಸಕರ ಕಟೌಟ್ ತೆರವು ಮಾಡಿದ್ದಾರೆ. ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದು, ಎಲ್ಲ ಕಡೆ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ. 24 ರಂದ 15 ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಮೇ.23 ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಕರ್ನಾಟಕದಲ್ಲಿ ಒಟ್ಟು 5,21,73,579 ಮತದಾರರು ಇದ್ದಾರೆ, ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561, ಮಹಿಳಾ ಮತದಾರರು 2,59,26,319, ತೃತೀಯ ಲಿಂಗಿ ಮತದಾರರು 4,699 ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

You May Also Like