ಮತ ಎಣಿಕೆಗೆ 2 ದಿನಾ ಬೇಕೆ.? : ನಟ ಉಪೇಂದ್ರ ಟ್ವೀಟ್ ವೈರಲ್

Here's a look at films directed by Kannada film star Upendra | The Times of  India

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದ ಜನರಿಗೆ ಕೊನೆಗೂ ಚುನಾವಣಾ ಆಯೋಗ ಉತ್ತರ ಕೊಟ್ಟಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಿದೆ.

ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ ಬೆನ್ನಲ್ಲೇ ನಟ ಉಪೇಂದ್ರ ಮಾಡಿರುವ ಟ್ವೀಟ್ ಎಲ್ಲರ ಗಮನ ಸೆಳೆದಿದೆ.

ಮತ ಎಣಿಕೆಗೆ 2 ದಿನಾ ಬೇಕಾ ? ನನಗೆ ಗೊತ್ತಿಲ್ಲಾ..? ಗೊತ್ತಿದ್ದರೆ ತಿಳಿಸಿ ಎಂದು ನಟ ಉಪೇಂದ್ರ ಟ್ವೀಟ್ ಮಾಡಿದ್ದಾರೆ.

ಏನಿದು ನಟ ಉಪೇಂದ್ರ ಟ್ವೀಟ್..?

ಮತ ಎಣಿಕೆಗೆ 2 ದಿನಾ ಬೇಕಾ ? ಡಿಜಿಟಲ್ ವೋಟಿಂಗ್ ಅಲ್ವಾ ? ಮತ ಎಣಿಕೆಗೆ 2 ದಿನಾ ಬೇಕಾ ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ.. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು ?! ವಾರೆ ವಾಹ್ . ವ್ಯಾಪಾರೀ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂ ಬಾಲಕರು..ಎಂದು ನಟ ಉಪೇಂದ್ರ ಟ್ವೀಟ್ ಮಾಡಿದ್ದಾರೆ.

You May Also Like