ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ; ಇಂದಿನಿಂದ ಬೆಂಗಳೂರು ಕರಗ ಉತ್ಸವಕ್ಕೆ ಬೀಳುತ್ತಾ ಬ್ರೇಕ್‌ ?

BIGG NEWS: ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ; ಇಂದಿನಿಂದ ಬೆಂಗಳೂರು ಕರಗ ಉತ್ಸವಕ್ಕೆ ಬೀಳುತ್ತಾ ಬ್ರೇಕ್‌ ?

ಬೆಂಗಳೂರು: ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗಕ್ಕೆ ಕ್ಷಣಗಣನೆ ಶುರುವಾಗಿದೆ.

ಈಗಾಗಲೇ ಕರಗ ಉತ್ಸವಕ್ಕೆ ಭರ್ಜರಿ ತಯಾರು ನಡೆಸುತ್ತಿದ್ದಾರೆ. ಇದೀಗ ಚುನಾವಣೆ ಆಯೋಗದಿಂದ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕರಗ ಉತ್ಸವಕ್ಕೆ ಬ್ರೇಕ್‌ ಬೀಳಲಿದೆ ಎಂಬ ಅನುಮಾನ ಮೂಡಿದೆ.

ಕಳೆದ ಎರಡು ವರ್ಷದಿಂದ ಕೊರೊನಾದಿಂದ ಕರಗ ಅದ್ಧೂರಿಯಾಗಿ ಆಚರಿಸುವುದಕ್ಕೆ ಆಗಿಲ್ಲ. ಆದರೆ ಈ ಭಾರಿ ಬೆಂಗಳೂರು ಕರಗ ಅದ್ಧೂರಿ ಆಚರಣೆಗೆ ಮುಂದಾಗಿದ್ದರು.ಹೀಗಾಗಿ ಈ ಬಾರಿ ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಇಂದು ರಾತ್ರಿ 10 ಗಂಟೆಗೆ ದೇವಸ್ಥಾನ ಆವರಣದಲ್ಲಿ ಧ್ವಜಸ್ಥಂಬ ನಡೆವ ಮೂಲಕ ಬೆಂಗಳೂರು ಕರಗಕ್ಕೆ ಚಾಲನೆ ನೀಡಲಾಗಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಬಿಬಿಎಂಪಿ ಅಧಿಕಾರಿಗಳು ಅದ್ಧೂರಿಯಾಗಿ ಮಾಡುವಂತಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಜಾತ್ರೆ, ಸರ್ಕಾರಿ ಕಾರ್ಯಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.

 

You May Also Like