ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳಿಗೆ `ಕುಲಸಚಿವ’ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

BIGG NEWS : ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳಿಗೆ `ಕುಲಸಚಿವ'ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ‘ಜಿಲ್ಲೆಗೊಂದು ವಿಶ್ವವಿದ್ಯಾಲಯ’ ಇರಬೇಕೆಂಬ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಹಾಸನ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಬೀದರ್ ವಿವಿ ಹಾಗೂ ಮಂಡ್ಯ ಮತ್ತು ರಾಯಚೂರು ಸಂಯೋಜಿತ ವಿಶ್ವವಿದ್ಯಾಲಯ ಸೇರಿದಂತೆ 9 ವಿವಿಗಳನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದರು.

9 ವಿವಿಗಳಿಗೆ ಸರ್ಕಾರ ಕುಲಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ‘ಜಿಲ್ಲೆಗೊಂದು ವಿಶ್ವವಿದ್ಯಾಲಯ’ ಇರಬೇಕೆಂಬ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಹಾಸನ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಬೀದರ್ ವಿವಿ ಹಾಗೂ ಮಂಡ್ಯ ಮತ್ತು ರಾಯಚೂರು ಸಂಯೋಜಿತ ವಿಶ್ವವಿದ್ಯಾಲಯಗಳನ್ನು ವರ್ಚುಯಲ್ ಆಗಿ ಉದ್ಘಾಟಿಸಿದರು.

ಇದರ ಜತೆಯಲ್ಲೇ 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು 75 ಕೋಟಿ ರೂಪಾಯಿ ವೆಚ್ಚದಲ್ಲಿ ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಕೆಐಟಿ) ಆಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷಿ ಯೋಜನೆಗೂ ಚಾಲನೆ ನೀಡಲಾಯಿತು. ಅಲ್ಲದೆ, ಧಾರವಾಡದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿಯ ಕಟ್ಟಡವನ್ನು ಕೂಡ ಲೋಕಾರ್ಪಣೆ ಮಾಡಲಾಯಿತು.

ಈ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯಿಂದ 9 ನೂತನ ವಿವಿಗಳಿಗೆ ಕುಲಸಚಿವರು (ಮೌಲ್ಯಮಾಪನ) ಹುದ್ದೆಗಳಿಗೆ ನೇಮಕ ಮಾಡಿ ಆದೇಶಿಸಿದೆ.

ಹಾಸನ ವಿವಿಗೆ – ಡಾ.ಪುಟ್ಟಸ್ವಾಮಿ, ಚಾಮರಾಜನಗರ ವಿವಿಗೆ – ಡಾ.ಪಿ ಮಾದೇಶ್, ಕೊಪ್ಪಳ ವಿಶ್ವವಿದ್ಯಾಲಯ – ಡಾ.ಕೆವಿ ಪ್ರಸಾದ, ಹಾವೇರಿ ವಿವಿಗೆ- ಪ್ರೊ.ವಿಜಯಲಕ್ಷ್ಮೀ ಶಿರ್ಲಾಪುರ, ಬಾಗಲಕೋಟೆ ವಿವಿ – ಡಾ.ಖಡ್ಕೆ ಉದಯಕುಮಾರ್, ಕೊಡಗು ವಿವಿಗೆ – ಡಾ.ಸೀನಪ್ಪ, ಬೀದರ್ ವಿವಿಗೆ – ಡಾ.ಪರಮೇಶ್ವರನಾಯ್ಕ್ ಬಿ, ಮೈಸೂರು ವಿವಿಗೆ ಡಾ.ಕೆಎಂ ಮಹಾದೇವನ್ ಹಾಗೂ ಬೆಂಗಳೂರು ಉತ್ತರ ವಿವಿ – ಡಾ.ಹೆಚ್ ಸಿ ಮಂಜುನಾಥ್ ನೇಮಿಸಿ ಆದೇಶಿಸಿದೆ.

You May Also Like