ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ : ಜನಪ್ರತಿನಿಧಿ ನ್ಯಾಯಾಲಯ ಆದೇಶ

BIGG NEWS : ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ : ಜನಪ್ರತಿನಿಧಿ ನ್ಯಾಯಾಲಯ ಆದೇಶ

ಬೆಂಗಳೂರು : ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.

ಮಾಡಾಳು ವಿರೂಪಾಕ್ಷಪ್ಪರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಆದರೆ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದೆ.

10 ದಿನಗಳ ಕಾಲ ಲೋಕಾಯುಕ್ತ ಪೊಲೀಸರು ತಮ್ಮ ವಶಕ್ಕೆ ನೀಡಬೇಕು ಎಂಬ ಮನವಿಗೆ ಮಾಡಾಳು ವಿರೂಪಾಕ್ಷಪ್ಪ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಪರ-ಪ್ರತಿವಾದ ಆಲಿಸಿದ ನ್ಯಾಯಾಲಯವು ಕೊನೆಗೂ ಮಾಡಾಳು ವಿರೂಪಾಕ್ಷಪ್ಪರನ್ನು 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿತು.

You May Also Like