ಹೈಕಮಾಂಡ್ ಡಿ.ಕೆ. ಶಿವಕುಮಾರ್ `ಮುಖ್ಯಮಂತ್ರಿ’ ಆಗಲು ಒಪ್ಪಲ್ಲ : ಸಿದ್ದರಾಮಯ್ಯ ಹೊಸ ಬಾಂಬ್

BIGG NEWS : ಹೈಕಮಾಂಡ್ ಡಿ.ಕೆ. ಶಿವಕುಮಾರ್ `ಮುಖ್ಯಮಂತ್ರಿ' ಆಗಲು ಒಪ್ಪಲ್ಲ : ಸಿದ್ದರಾಮಯ್ಯ ಹೊಸ ಬಾಂಬ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು.ಇದು ನನ್ನ ಸಾರ್ವಜನಿಕ ಜೀವನದ ಕೊನೇ ಚುನಾವಣೆ. ಹೀಗಾಗಿ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿಯಾಗಲು ಹೈಕಮಾಂಡ್ ಅವಕಾಶ ನೀಡುವುದಿಲ್ಲ ಎಂದು ಸಂದರ್ಶನದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯನವರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಚುನಾವಣೆ ಹೊತ್ತಲ್ಲಿ ಸಿದ್ದರಾಮಯ್ಯ ಅವರ ಈ ಹೇಳಿಕೆ ಪಕ್ಷದೊಳಗೆ ತಳಮಳ ಸೃಷ್ಟಿಸಿದೆ.

You May Also Like