ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬAಧಿಸಿದAತೆ ಜಿಲ್ಲೆಯ ಕೊರಟಗೆರೆ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ಏಪ್ರಿಲ್ 5ರಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 20.50ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟೇನಹಳ್ಳಿ ಚೆಕ್‌ಪೋಸ್ಟ್ನಲ್ಲಿ ಏಪ್ರಿಲ್ 5ರಂದು ಕೆಎ-06-ಎ-4597 ಸ್ವಿಫ್ಟ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ 1.50ಲಕ್ಷ ರೂ. ನಗದು ದೊರೆತಿದ್ದು, ವಾಹನದಲ್ಲಿದ್ದ ರುದ್ರೇಶ್ ಬಿನ್ ಶಿವಣ್ಣ ಅವರನ್ನು ವಿಚಾರಿಸಿದಾಗ ಸಮಂಜಸವಾದ ಉತ್ತರವನ್ನು ನೀಡದೇ ಇರುವುದರಿಂದ ನಿಯೋಜಿತ ಸ್ಥಿರ ಕಣ್ಗಾವಲು ತಂಡದ ಸದಸ್ಯರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.