ನಕಲಿ ಆಹ್ವಾನ ಪತ್ರಿಕೆ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ

This wedding invitation card of Alia Bhatt, Ranbir Kapoor is fake!

ತುಮಕೂರು: ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬ0ಧಿಸಿದ0ತೆ ಮತಗಟ್ಟೆ ಅಧಿಕಾರಿ(PRO)/ಸಹಾಯಕ ಮತಗಟ್ಟೆ ಅಧಿಕಾರಿ(APRO)ಗಳನ್ನಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ/ಸಿಬ್ಬಂದಿಗಳು ನಕಲಿ ಆಹ್ವಾನ ಪತ್ರಿಕೆಗಳನ್ನು ಸಲ್ಲಿಸಿ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.
ಎನ್.ಐ.ಸಿ. ಕಚೇರಿಯಲ್ಲಿಂದು ಪತ್ರಿಕಾ ಹೇಳಿಕೆ ನೀಡಿದ ಅವರು ಮದುವೆ, ಮತ್ತಿತರ ಸಮಾರಂಭಗಳಿರುವುದರಿ0ದ ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಬೇಕೆಂದು ನಕಲಿ ಆಹ್ವಾನ ಪತ್ರಿಕೆಗಳನ್ನು ಸಲ್ಲಿಸುತ್ತಿರುವುದು ಕಂಡು ಬಂದಿದೆ. ಆಹ್ವಾನ ಪತ್ರಿಕೆಯನ್ನು ಮುದ್ರಣ ಮಾಡುವ ಮುದ್ರಕರು ಸೂಕ್ತ ದಾಖಲೆ ಪಡೆಯದೇ ಪತ್ರಿಕೆಗಳನ್ನು ಮುದ್ರಣ ಮಾಡಬಾರದು ಎಂದರಲ್ಲದೆ ಚುನಾವಣಾ ದಿನ ಹಾಗೂ ಹಿಂದಿನ ದಿನದಂದು ಸಮಾರಂಭವಿರುವ ಬಗ್ಗೆ ಸುಳ್ಳು ಆಹ್ವಾನ ಪತ್ರಿಕೆ ನೀಡಿದ ಚುನಾವಣಾ ಕರ್ತವ್ಯ ನಿಯೋಜಿತರನ್ನು ಆರ್.ಪಿ. ಕಾಯ್ದೆ 134ರನ್ವಯ ಅಮಾನತ್ತುಗೊಳಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪಿಆರ್‌ಓ ಹಾಗೂ ಎಪಿಆರ್‌ಓ ಸೇರಿದಂತೆ ಒಟ್ಟು 8622 ಅಧಿಕಾರಿ/ಸಿಬ್ಬಂದಿಗಳಿಗೆ ಏಪ್ರಿಲ್ 11ರಂದು ತರಬೇತಿಯನ್ನು ಆಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಗಳು ಗೈರು ಹಾಜರಾಗದೇ ತಪ್ಪದೇ ತರಬೇತಿಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ನಿರ್ದೇಶನ ನೀಡಿದರು.
ಜಿಲ್ಲೆಯ ಪ್ರತಿ ವಿಧಾಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಧಿಕಾರಿಗಳೇ ಇರುವ ತಲಾ 5ರಂತೆ ಒಟ್ಟು 55 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಇದಕ್ಕಾಗಿ 154 ಮಹಿಳೆಯರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದರಲ್ಲದೆ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯಕ್ಕೆ ತೆರಳಿರುವ ಪಿಆರ್‌ಓ ಹಾಗೂ ಎಪಿಆರ್‌ಓಗಳು ಇಲಾಖಾ ಮುಖ್ಯಸ್ಥರ ಮೂಲಕ ಸಂಬAಧಿಸಿದ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದಲ್ಲಿ ಮೌಲ್ಯಮಾಪನದಿಂದ ಮರಳಿದ ನಂತರ ಇವರಿಗೆ ಪ್ರತ್ಯೇಕವಾಗಿ ಚುನಾವಣಾ ತರಬೇತಿ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಅಲ್ಲದೆ ಪ್ರತಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಯುವ ಮತದಾರರಿಗಾಗಿ ತಲಾ 4ರಂತೆ ಯುವ ಅಧಿಕಾರಿಗಳನ್ನೊಳಗೊಂಡ ಒಟ್ಟು 44 ಯುವ ಮತಗಟ್ಟೆ ಹಾಗೂ ವಿಕಲಚೇತನ ಮತದಾರರಿಗಾಗಿ ತಲಾ 4ರಂತೆ ಒಟ್ಟು 44 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಎನ್.ಐ.ಸಿ. ಅಧಿಕಾರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

You May Also Like