ಬೇಸಿಗೆ ಶಿಬಿರ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸಹಕಾರಿ- ಬಸವಯ್ಯ

ತುಮಕೂರು: ಪ್ರತಿಯೊಂದು ಮಗುವಿನಲ್ಲಿಯೂ ಒಂದಲ್ಲಾ ಒಂದು ಪ್ರತಿಭೆ ಅಡಗಿರುತ್ತದೆ. ಇಂತಹ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಬೇಸಿಗೆ ಶಿಬಿರ ಸಹಕಾರಿಯಾಗಲಿದೆ ಎಂದು ಜಿಲ್ಲಾ ಬಾಲಭವನ ಸದಸ್ಯ ಬಸವಯ್ಯ ತಿಳಿಸಿದರು.
ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿಂದು ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ 10 ದಿನಗಳ ಕಾಲ ಹಮ್ಮಿಕೊಂಡಿರುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಈ ಶಿಬಿರದಲ್ಲಿ ಯೋಗ, ಕರಾಟೆ, ಚಿತ್ರಕಲೆ, ಕರಕುಶಲತೆ, ನೃತ್ಯ, ರಂಗಚಟುವಟಿಕೆ ಕುರಿತು ತರಬೇತಿ ನೀಡಲಾಗುವುದು. ಪೋಷಕರು ತಮ್ಮ ಮಕ್ಕಳನ್ನು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಅನುವು ಮಾಡಿಕೊಡಬೇಕೆಂದು ತಿಳಿಸಿದರು.
ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ್ ಮಾತನಾಡಿ, ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವೇದಿಕೆಯನ್ನು ಬಳಸಿಕೊಳ್ಳಬೇಕು ಎಂದರಲ್ಲದೆ, ಪರಿಸರದ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕೆಂದರು. ಈ ನಿಟ್ಟಿನಲ್ಲಿ ಮಕ್ಕಳು ತಮ್ಮ ಮನೆಯ ಮುಂದೆ ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆ0ದು ಕಿವಿ ಮಾತು ಹೇಳಿದರು.

You May Also Like