ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ: ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ

I support PM Modi's leadership, BJP” - Star of Mysore

ಸಾಂದರ್ಭಿಕ ಚಿತ್ರ

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ

ಮಂಡ್ಯ: ಇತ್ತೀಚೆಗಷ್ಟೇ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು(ಏಪ್ರಿಲ್ 17) ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ. ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ. ಮದ್ದೂರಿನಲ್ಲಿ ದಿವಂಗತ ಅಂಬರೀಶ್ ಅಭಿಮಾನಿಗಳು ಹೆಚ್ಚು ಇದ್ದಾರೆ. ಅಂಬರೀಶ್ ಅಭಿಮಾನಿಗಳಿರುವುದರಿಂದ ಬಿಜೆಪಿಗೆ ಪ್ಲಸ್​ ಆಗುತ್ತೆ. ಮುಂದಿನ ದಿನಗಳಲ್ಲಿ ಬಿಜೆಪಿ ಪರ ಅಭಿಷೇಕ್ ಪ್ರಚಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಬೆಂಬಲಿಸಿದ್ದ ರೈತ ಸಂಘದ ವೇಳೆ ದರ್ಶನ್​ ಪುಟ್ಟಣ್ಣಯ್ಯ ಅವರು ಈ ಬಾರಿ ಮೇಲುಕೋಟೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ಅವರ ಪರ ಪ್ರಚಾರದ ಬಗ್ಗೆ ಸುಮಲತಾ ಪ್ರತಿಕ್ರಿಯಿಸಿ, ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚೆ ಮಾಡಿ ತಿಳಿಸುತ್ತೇನೆ ಎಂದು ಹೇಳಿದರು.

ಸುಮಲತಾ ಅಪ್ರಬುದ್ಧ ರಾಜಕಾರಣಿ ಎಂಬ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ, ಅಪ್ರಬುದ್ಧ ರಾಜಕಾರಣಿ ಯಾರು ಎನ್ನುವುದನ್ನು ಜನ ತೋರಿಸುತ್ತಾರೆ. 5 ವರ್ಷದಲ್ಲಿ ಅವರ ಸಾಧನೆ ಏನು ಎಂದು ಜನರಿಗೆ ಗೊತ್ತಿಲ್ಲ. ಚುನಾವಣೆಯಲ್ಲಿ ರವೀಂದ್ರ ಶ್ರೀಕಂಠಯ್ಯಗೆ ಜನ ಪಾಠ ಕಲಿಸುತ್ತಾರೆ ಎಂದು ತಿರುಗೇಟು ನೀಡಿದರು.

ಈಗಾಗಲೇ ಸುಮಾಲತಾ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡಲಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಂಡ್ಯದಿಂದ ಆಯ್ಕೆಯಾಗಿರುವ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಬಿಜೆಪಿ ಸೇರುವ ವಿಚಾರ ಮತ್ತೆ ಚರ್ಚೆಗೆ ಬಂದಿತ್ತು. ಆದ್ರೆ, ಸುಮಲತಾ ಅಂಬರೀಶ್ ಅವರು ಅಧಿಕೃತ ಬಿಜೆಪಿ ಸೇರ್ಪಡೆ ಬದಲು ಬಾಹ್ಯ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದರು. ಅವರು ಬಿಜೆಪಿ ಸೇರ್ಪಡೆಗೆ ಕಾನೂನು ತೊಡಕಿದೆ. ಹೀಗಾಗಿ ಅವರ ಸದ್ಯಕ್ಕೆ ಬಾಹ್ಯ ಬೆಂಬಲ ಎಂದು ತಿಳಿಸಿದ್ದರು. ಹಾಗಾದ್ರೆ, ಸಂಸದೆ ಅವಧಿ ಇನ್ನೂ ಒಂದು ವರ್ಷ ಬಾಕಿ ಇದ್ದು, ಅವಧಿ ಮುಗಿದ ಬಳಿಕ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

You May Also Like