ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ

ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ.

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್  ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

You May Also Like