ಜಿಲ್ಲೆಯಲ್ಲಿ ಡಿಸೆಂಬರ್ 1 ರಿಂದ 3ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾದ್ಯತೆಯಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದ್ದು ರೈತರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು. ಮಳೆ ಪ್ರಮಾಣ ಕಡಿಮೆಯಾದ ಮೇಲೆ ರಾಗಿ ಕಟಾವು ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.