ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಕುರಿತು ಚರ್ಚಿಸಲಾಗುವುದು. ಕುಂದು ಕೊರತೆಗಳಿದ್ದಲ್ಲಿ ಸಂಬಂಧಿಸಿದವರು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನವೆಂಬರ್ 26ರೊಳಗಾಗಿ ಲಿಖಿತ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆದವರು ಸ್ವೀಕೃತಿಯೊಂದಿಗೆ ನವೆಂಬರ್ 28ರಂದು ನಡೆಯುವ ಕುಂದು ಕೊರತೆ ಸಭೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.