ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಜಾಲತಾಣ https://ssp.karnataka.gov.in ಮೂಲಕ ಸಲ್ಲಿಸಬಹುದಾಗಿದ್ದು, ಶಾಲಾ/ ಕಾಲೇಜು/ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್ ತಿಳಿಸಿದ್ದಾರೆ.