ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನವೆಂಬರ್ 26ರ ಮಂಗಳವಾರ ಬೆಳಿಗ್ಗೆ 10ಗಂಟೆಗೆ ನಗರದ ಎಂಪ್ರೆಸ್ ಶಾಲಾ ಆವರಣದಲ್ಲಿ “ಭಾರತ ಸಂವಿಧಾನ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಘನ ಉಪಸ್ಥಿತರಿರುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ: ಗಂಗಾಧರ ಪಿ.ಎಸ್., ಚಿಕ್ಕಬಳ್ಳಾಪುರ ಜಿಲ್ಲೆ ಕಾದಲವೇಣಿಯ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಸುಧಾಕರ್ ರೆಡ್ಡಿ ಹಾಗೂ ತುಮಕೂರು ರಾಮಕೃಷ್ಣಾಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.