ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ನವೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ನೇರ ಸಂದರ್ಶನವು ನಗರದ ಉಪ್ಪಾರಹಳ್ಳಿ ಮುಖ್ಯ ರಸ್ತೆ, ಉಪ್ಪಾರಹಳ್ಳಿಯಲ್ಲಿರುವ ಕಡಬ ಆರ್ಕೇಡ್ನಲ್ಲಿ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, 9380436016, 9071021143, 9513136642ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.